ಶಿರ್ತಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈಬಾರಿ ಮೂವತ್ತರ ಸಂಭ್ರಮ. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೇದಮೂರ್ತಿ ವಾಲ್ಪಾಡಿ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ ಮೂವತ್ತನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸೂರಜ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

ಹಿರಿಯರನೇಕರು ಹುಟ್ಟುಹಾಕಿರುವ ಶಿರ್ತಾಡಿಯ ಗಣೇಶೋತ್ಸವ ಸಮಿತಿಯಲ್ಲಿ ಹಲವರು ಅಧ್ಯಕ್ಷರಾಗಿ, ವಿವಿಧ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ್ದರು.ಮೂವತ್ತನೇ ವರ್ಷದ ಸಂಭ್ರಮದ ಸಾರಥಿಯಾಗಿರುವವರು ಶಿರ್ತಾಡಿಯ ಆಪತ್ಬಾಂಧವ ಸೂರಜ್ ಕುಮಾರ್ ಜೈನ್.
ಕಳೆದೊಂದು ತಿಂಗಳಿಂದ ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯ ಪದಾಧಿಕಾರಿಗಳೊಂದಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.ಈಗಾಗಲೇ ಸಾರ್ವಜನಿಕರಿಗೆ ಉಪಕಾರವಾಗುವಂತಹ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಕಳೆದವಾರ ಉಚಿತ ಹೃದ್ರೋಗ ತಪಾಸಣಾ ಶಿಬಿರವು ನಡೆದಿತ್ತು.ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳೂ ನಡೆದಿತ್ತು.
ನಾಳೆಯ ದಿನವೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ.
ಎಸ್.ಡಿ.ಸಂಪತ್ ಸಾಮ್ರಾಜ್ಯ ಅವರು ಸಮಿತಿಯ ಗೌರವಾಧ್ಯಕ್ಷರಾಗಿದ್ದು ಸಮಿತಿಯ ಅಧ್ಯಕ್ಷರಾಗಿ ಸೂರಜ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್, ಕೋಶಾಧಿಕಾರಿಯಾಗಿ ರಮಾನಂದ ದಡ್ಡಾಲ್ಪಲ್ಕೆ, ಅಕ್ಷಯ್ ಸಹಿತ ಹಲವಾರು ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.








































