ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಅವರಿಗೆ ‘ಸಾಧಕ ರತ್ನ’ ಪ್ರಶಸ್ತಿ

Picture of Namma Bedra

Namma Bedra

Bureau Report

ಕಳೆದ ಮೂರು ದಶಕಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿ ತಮ್ಮ ಬರವಣಿಗೆಯ ಮೂಲಕ ಖ್ಯಾತರಾಗಿರುವ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಕೇರಳದ ಕೊಚ್ಚಿಯಲ್ಲಿ ನಡೆದ ಸಮಾರಂಭದಲ್ಲಿ ‘ಸಾಧಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
‌ ಕೇರಳದ ಕೊಚ್ಚಿಯ ಕರೂರ್ ಗೋಕುಲಮ್ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ‘ಕೇರಳ- ಕರ್ನಾಟಕ ಜಾನಪದ ಉತ್ಸವ’ ದಲ್ಲಿ ಕೇರಳ ಸರಕಾರದ ಬಂದರು ಮತ್ತು ಮೀನುಗಾರಿಕಾ ಸಚಿವರಾದ ವಿ.ಇ.ಅಬ್ದುಲ್ ಗಫೂರ್ ಅವರು ಈ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ಜಗದೀಶ್ಚಂದ್ರ ಅಂಚನ್ ಅವರು ಕಳೆದ ಮೂರು ದಶಕಗಳಲ್ಲಿ ಹಲವಾರು ಕ್ರೀಡಾ ಲೇಖನಗಳನ್ನು ಬರೆದು ಗಮನಸೆಳೆದಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ,ಎರ್ನಾಕುಲಂ ಶಾಸಕ ಟಿ‌.ಜೆ.ವಿನೋದ್,ಕರ್ನಾಟಕ ಸರಕಾರದ ಕನಿಷ್ಠ ವೇತನ ಆಯೋಗದ ಸದಸ್ಯ ಟಿ.ಎಂ.ಶಾಹಿದ್,ಕ.ಸಾ.ಪ.ಕೇರಳ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ.ಉಳಿಯತ್ತಡ್ಕ,ಕ‌.ಜಾ.ಪ ಕೇರಳ ಘಟಕಾಧ್ಯಕ್ಷ ಡಾ.ಮಲ್ಲಿಕಾರ್ಜುನ ಎಸ್.ನಾಸಿ,ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೆಳೇರಿ,ಪ್ರಮುಖರಾದ ಅಬ್ದುಲ್ ರಹ್ಮಾನ್, ಪತ್ರಕರ್ತ ರವಿ ನಾಯ್ಕಾಪು,ಶಿವರೆಡ್ಡಿ ಖ್ಯಾಡೇದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top