ನಾರಾಯಣ ಪಿ.ಎಂ.ಅವರಿಗೆ ‘ಸಿರಿಪುರ ಪ್ರಶಸ್ತಿ’

Picture of Namma Bedra

Namma Bedra

Bureau Report

ಮೂಡುಬಿದಿರೆಯ ನಿಶ್ಮಿತಾ ಸಮೂಹ ಸಂಸ್ಥಗಳ ಸಂಸ್ಥಾಪಕ ನಾರಾಯಣ ಪಿ.ಎಂ.ಅವರು 2026 ನೇ ಸಾಲಿನ ‘ ಸಿರಿಪುರ ಪ್ರಶಸ್ತಿ’ ಗೆ ಆಯ್ಕೆಯಾಗಿದ್ದಾರೆ.
ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಶ್ರೀ ಶಾರದಾ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ರಾಮಕೃಷ್ಣ ಶಿರೂರು ಅವರು ತಿಳಿಸಿದ್ದಾರೆ.
ಮೂಡುಬಿದಿರೆಯ ಪ್ರತಿಷ್ಠಿತ ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾಗಿರುವ ನಾರಾಯಣ ಪಿ.ಎಂ.ಅವರು ಕಳೆದ 35 ವರ್ಷಗಳಿಂದ ಮೂಡುಬಿದಿರೆ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿವಿಧ ಉದ್ಯಮಗಳ ಮೂಲಕ ಸುಮಾರು 500 ಕ್ಕಿಂತಲೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಿದ್ದಾರೆ.
ನಾರಾಯಣ ಪಿ.ಎಂ.ಅವರ ಧಾರ್ಮಿಕ, ಸಾಮಾಜಿಕ ಸೇವೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ರಾಮಕೃಷ್ಣ ಶಿರೂರು ಅವರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top