ಕಂಬಳ ಸಂರಕ್ಷಣೆ,ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಕೊಡಲ್ಪಡುವ ‘ಕಂಬಳ ಅಕಾಡೆಮಿ ಪ್ರಶಸ್ತಿ’ ಗೆ ನಮ್ಮ ಕುಡ್ಲ ವಾಹಿನಿಯ ಮುಖ್ಯಸ್ಥರಾಗಿರುವ ಲೀಲಾಕ್ಷ ಬಿ.ಕರ್ಕೇರ ಅವರು ಆಯ್ಕೆಯಾಗಿದ್ದಾರೆ.
ಗುರುವಾರ ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕಂಬಳ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡುತ್ತಾ ಬರುವ ಜೊತೆಗೆ ಕಂಬಳ ಮಾಲಕರು, ಓಟಗಾರರಿಗೆ ಪ್ರಶಸ್ತಿ ನೀಡುತ್ತಾ ಬಂದಿದ್ದ ಲೀಲಾಕ್ಷ ಕರ್ಕೇರ ಅವರು ಕಂಬಳ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.












