ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಕೋಟದ ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶಿವರಾಮ ಕಾರಂತ ಪ್ರಶಸ್ತಿ’ಗೆ ಈಬಾರಿ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.
ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯತ್ ಗಳಿಗೆ ಪ್ರತಿವರ್ಷ ಕೋಟ ಶಿವರಾಮ ಕಾರಂತರ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಪಡುಮಾರ್ನಾಡು ಗ್ರಾಮ ಪಂಚಾಯತ್ ಈಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದೆ.
ನವೆಂಬರ್ 10 ರಂದು ನಡೆಯಲಿರುವ ಸಮಾರಂಭದಲ್ಲಿ ಮೇಘಾಲಯದ ರಾಜ್ಯಪಾಲರಾದ ವಿಜಯ ಶಂಕರ್ ಅವರಿಂದ ಪಂಚಾಯತ್ ಅಧ್ಯಕ್ಷರಾದ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ ಮತ್ತು ಸದಸ್ಯರು ಈ ಪ್ರಶಸ್ತಿಯನ್ನು ಸ್ವೀಕರಿದಲಿದ್ದಾರೆ.
