ಮೂಡುಬಿದಿರೆಯ ಆಟೊ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ ನಡೆದ ದೀಪಾವಳಿ ಪೂಜೆ ಮತ್ತು ಸನ್ಮಾನ ಸಮಾರಂಭದಲ್ಲಿ ಮೂಡುಬಿದಿರೆಯಲ್ಲಿ ಕಳೆದ 35 ವರ್ಷಗಳಿಂದ ರಿಕ್ಷಾ ಚಾಲಕರಾಗಿ ಹಿರಿಯರಾಗಿರುವ ಅಬ್ದುಲ್ ರಹ್ಮಾನ್ ಪುಚ್ಚೇರಿ ಅವರನ್ನು ಸನ್ಮಾನಿಸಲಾಯಿತು.
ಚೌಟರ ಅರಮನೆಯ ಕುಲದೀಪ್ ಎಂ, ನ್ಯಾಯವಾದಿಗಳಾದ ಬಾಹುಬಲಿ ಪ್ರಸಾದ್,ಶರತ್ ಶೆಟ್ಟಿ, ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಪೂರ್ಣಚಂದ್ರ ಜೈನ್,ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಕೆ.ಪಿ.ಜಗದೀಶ್ ಅಧಿಕಾರಿ, ಪುರಸಭಾ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸದಸ್ಯ ರಾಜೇಶ್ ನಾಯ್ಕ್,ತೋಡಾರ್ ದಿವಾಕರ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
