ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ್ ಕುಮಾರ್ ರಾಜೀನಾಮೆ?

Picture of Namma Bedra

Namma Bedra

Bureau Report

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ್ ಕುಮಾರ್ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವಿದ್ದರೂ ಕೆಲವೊಂದು ಆಗಲೇಬೇಕಾದ ಕೆಲಸಗಳು ಆಗುತ್ತಿಲ್ಲ, ಜನರು ಜವಾಬ್ದಾರಿಯುತ ಸ್ಥಾನದಲ್ಲಿರುವ ನನ್ನಲ್ಲೇ ಪ್ರಶ್ನಿಸುವುದು, ನಮ್ಮಿಂದ ಕೆಲವೊಂದು ಕೆಲಸ ಮಾಡಿಕೊಡಲು ಸಾಧ್ಯವಾಗದಿದ್ದರೆ ಈ ಸ್ಥಾನದಲ್ಲಿದ್ದು ಏನು ಪ್ರಯೋಜನ? ಅದೂ ಅಲ್ಲದೆ ಕೆಲವು ವಿಷಯಗಳಿಗೆ ನಮ್ಮ ಮೇಲೆ ಆರೋಪ ಹೊರಿಸುತ್ತಾರೆ,ಸುಖಾ ಸುಮ್ಮನೆ ಈ ಆರೋಪಗಳು ಕೇಳಿ ಬರುವುದರಿಂದ ಮನಸ್ಸಿಗೆ ನೋವಾಗುತ್ತದೆ ಎಂದು ಅವರ ಕೆಲವು ಆಪ್ತರಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
ಪ್ರವೀಣ್ ಅವರು ಬೆಂಗಳೂರಿನಲ್ಲಿದ್ದು ನಾಳೆ ರಾಜೀನಾಮೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top