ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ,ಅಶ್ವಥ್ಥಪುರ- ಬಡಗಮಿಜಾರು ಇದರ ನೂತನ ಅಧ್ಯಕ್ಷರಾಗಿ ತೆಂಕಮಿಜಾರು ಗ್ರಾ.ಪಂ.ಮಾಜಿ ಅಧ್ಯಕ್ಷ, ಸಮಾಜ ಸೇವಕ ಬಾಲಕೃಷ್ಣ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.
ಕಾರ್ಯಾಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ,ಕಾರ್ಯದರ್ಶಿಯಾಗಿ ಶಿವಕುಮಾರ್ ಶೆಟ್ಟಿ,ಕೋಶಾಧಿಕಾರಿಯಾಗಿ ರಾಕೇಶ್ ಕುಲಾಲ್,ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಡಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಯೋಗೀಶ್ ಕುಲಾಲ್ ಅವರು ಆಯ್ಕೆಯಾಗಿದ್ದಾರೆ.











