ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚುವರಾದ ದಿನೇಶ್ ಗುಂಡೂರಾವ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
