ಎಸ್.ಕೆ.ಎಸ್.ಎಸ್.ಎಫ್.ಮೂಡುಬಿದಿರೆ ವಲಯ ಸಮಿತಿಯ ವತಿಯಿಂದ ಎಸ್.ಐ.ಆರ್.ಅಕ್ರಮಗಳ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಇಂದು ಸಂಜೆ 4 ಗಂಟೆಗೆ ಮೂಡುಬಿದಿರೆ ತಹಶಿಲ್ದಾರ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಎಸ್.ಕೆ.ಎಸ್.ಎಸ್.ಎಫ್.ಮೂಡುಬಿದಿರೆ ವಲಯಾಧ್ಯಕ್ಷ ಎಂ.ಎ.ಎಸ್.ಆಸಿಫ್ ತೋಡಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಕೆ.ಅಭಯಚಂದ್ರ, ಎಸ್.ಕೆ.ಎಸ್.ಎಸ್.ಎಫ್ ರಾಜ್ಯಾಧ್ಯಕ್ಷ ರಫೀಕ್ ಹುದವಿ ಕೋಲಾರಿ,ಉಪಾಧ್ಯಕ್ಷ ಇಕ್ಬಾಲ್ ಬಾಳಿಲ ಹಾಗೂ ನ್ಯಾಯವಾದಿ ಇರ್ಷಾದ್ ಎನ್.ಜಿ.ಅವರು ಭಾಗವಹಿಸಲಿದ್ದಾರೆ ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಇದು ಕೇವಲ ಒಂದು ಸಂಘಟನೆಯ ಕಾರ್ಯಕ್ರಮವಲ್ಲ,ಪ್ರಜಾಪ್ರಭುತ್ವದ ಮೌಲ್ಯಗಳು,ಸಂವಿಧಾನಬದ್ಧ ಹಕ್ಕುಗಳು ಮತ್ತು ನ್ಯಾಯಯುಕ್ತ ಚುನಾವಣಾ ವ್ಯವಸ್ಥೆಯ ಕುರಿತು ನಮ್ಮ ಕಳಕಳಿಯನ್ನು ವ್ಯಕ್ತಪಡಿಸುವ ಒಂದು ಸಾರ್ವಜನಿಕ ವೇದಿಕೆಯಾಗಿದೆ ಎಂದು ಸಮಿತಿಯ ಉಪಾಧ್ಯಕ್ಷ ಶಬೀರ್ ಹಂಡೇಲ್ ಅವರು ತಿಳಿಸಿದ್ದಾರೆ.



