ಅಮೃತಮಹೋತ್ಸವ ಸಂಭ್ರಮದಲ್ಲಿ ಪೆರಾಡಿ ಸೊಸೈಟಿ. *18 ರಂದು ‘ಸಂಗಮ’ ಸಭಾಭವನ, ಗೋದಾಮು ಕಟ್ಟಡ ಉದ್ಘಾಟನೆ

Picture of Namma Bedra

Namma Bedra

Bureau Report

ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಗಳಿಸಿಕೊಂಡಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಗೆ ಈಗ 75 ರ ಸಂಭ್ರಮ.
ಈ ಅಮೃತ ಮಹೋತ್ಸವ ದ ನೆನಪಿಗೆ ‘ ಪಾಂಚಜನ್ಯ’ ಹೆಸರಿನಲ್ಲಿ ನ.18 ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು ಭರದ ಸಿದ್ಧತೆಗಳು ನಡೆಯುತ್ತಿದೆ.
ದ.ಕ.ಜಿಲ್ಲಾ ಮಟ್ಟದ 73 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂದರ್ಭದಲ್ಲೇ ಈ ದೊಡ್ಡ ಕಾರ್ಯಕ್ರಮ ಪೆರಾಡಿಯಲ್ಲಿ ನಡೆಯಲಿದೆ.
ನ.18 ರಂದು ಬೆಳಿಗ್ಗೆ 9-30ಕ್ಕೆ ಸಹಕಾರ ರತ್ನ ,ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಕಟ್ಟಡವನ್ನು ಸಹಕಾರ ರತ್ನ, ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿ ಉತ್ತಮ ನವೋದಯ ಸಂಘಗಳಿಗೆ ಗೌರವಾರ್ಪಣೆ ಮಾಡಲಿದ್ದಾರೆ.
ಸಹಕಾರ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ನೂತನ ಸಭಾಭವನ ‘ ಸಂಗಮ’ ವನ್ನು ಉದ್ಘಾಟಿಸಲಿದ್ದು ದ.ಕ.ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.ಖಾದರ್ ಫರೀದ್ ಅವರು ‘ಪಂಚಸಿರಿ’ ಸಭಾಭವನವನ್ನು ಉದ್ಘಾಟಿಸಲಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ರಸಗೊಬ್ಬರ ವಿಭಾಗವನ್ನು ಉದ್ಘಾಟಿಸಲಿದ್ದು ಪಡಿತರ ವಿಭಾಗವನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಲಿಫ್ಟ್ ಉದ್ಘಾಟಿಸಲಿದ್ದು ಸಿ.ಎಸ್.ಸಿ.ವಿಭಾಗವನ್ನು ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ಉದ್ಘಾಟಿಸಲಿದ್ದಾರೆ.
ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಉತ್ತಮ ಹೈನುಗಾರರಿಗೆ ಸನ್ಮಾನ ಮಾಡಲಿದ್ದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಸತಿ ಸಮುಚ್ಚಯವನ್ನು ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಕಾರ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ.
‘ರೈತ ಸಂಗಮ’ ಸ್ಮರಣ ಸಂಚಿಕೆಯನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಿಡುಗಡೆಗೊಳಿಸಲಿದ್ದು ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರರಾದ ಎ.ಜೀವಂಧರ ಕುಮಾರ್ ಅವರು ಸಹಕಾರಿ ಜಾಥಾವನ್ನು ಉದ್ಘಾಟಿಸಲಿದ್ದಾರೆ.
ವಿವಿಧ ಕಾರ್ಯಕ್ರಮಗಳು ಇದೇ ಸಂದರ್ಭದಲ್ಲಿ ನಡೆಯಲಿದ್ದು ಸಂಜೆ 6 ಕ್ಕೆ ಸತೀಶ್ ಕೆ.ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಮೇಘರಾಜ್, ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಸಫ್ವಾನ್ ಬಾಖವಿ ಮಾಪಾಲ್ , ಗುರುದೇವ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್,ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಶಂಕರ ಭಟ್ ಎಸ್.ಬಾಲ್ಯ, ಹೇಮರಾಜ್ ಕೆ, ಪಿ.ಕೆ.ರಾಜು ಪೂಜಾರಿ ಹಾಗೂ ಎನ್.ಸೀತಾರಾಮ ರೈ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2-30ರಿಂದ ಕೆ.ಪಿ.ಮಿಲನ್ ಕುಮಾರ್ ಸಾರಥ್ಯದಲ್ಲಿ ‘ ಸಮ್ಮಿಲನ್’ ಸಂಗೀತ ರಸಮಂಜರಿ, ಸಂಜೆ 4 ರಿಂದ ಕುದ್ರೋಳಿ ಗಣೇಶ್ ಬಳಗದವರಿಂದ ಜಾದೂ ಹಾಗೂ ರಾತ್ರಿ 7 ರಿಂದ ಚಾ ಪರ್ಕ ಕಲಾವಿದರಿಂದ ‘ ಯಾನೊರಿ ಬರೊಲಿಯಾ? ‘ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಹೇಮಾ ಅವರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top