ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ 20 ಕೋಟಿಗೂ ಹೆಚ್ಚು ಅನುದಾನ *ಅಭಿವೃದ್ಧಿಗೆ ಹಣ ಕೊಡುವುದಿಲ್ಲ ಎಂದವರಿಗೆ ದಾಖಲೆ ನೀಡಿದ ಗ್ಯಾರಂಟಿ ಅಧ್ಯಕ್ಷ

Picture of Namma Bedra

Namma Bedra

Bureau Report

ಪಂಚ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯ ಸರಕಾರದಿಂದ ಹಣ ಬಿಡುಗಡೆಯಾಗುತ್ತಿಲ್ಲ, ಇದರಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಣ ಬರುತ್ತಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಆರೋಪ ಮಾಡುತ್ತಿರುವ ವಿರೋಧ ಪಕ್ಷದವರಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಎಷ್ಟು ಹಣ ಬಿಡುಗಡೆಯಾಗಿದೆ ಎನ್ನುವುದರ ಪಟ್ಟಿಯನ್ನು ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ದಾಖಲೆ ರೂಪದಲ್ಲಿ ಬಿಡುಗಡೆಗೊಳಿಸಿದ್ದಾರೆ.
ಕಳೆದ ಮೂರ್ನಾಲ್ಕು ವರ್ಷಗಳ ಅವಧಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 20 ಕೋಟಿಗಿಂತಲೂ ಹೆಚ್ಚು ಹಣ ರಾಜ್ಯ ಸರಕಾರದಿಂದ ಬಿಡುಗಡೆಯಾಗಿದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅವಧಿಯಲ್ಲಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ಬಂದಿದೆ,ಆದರೂ ಪಂಚ ಗ್ಯಾರಂಟಿಯ ನೆಪದಲ್ಲಿ ಬಿಜೆಪಿಯವರು ಅನುದಾನ ಸಿಗುತ್ತಿಲ್ಲವೆಂದು ಸುಳ್ಳಾರೋಪ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆಂದು ಅರುಣ್ ಕುಮಾರ್ ಶೆಟ್ಟಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವ ಯಾವ ಅಭಿವೃದ್ಧಿ ಕೆಲಸಗಳಿಗೆ ಎಷ್ಟೆಷ್ಟು ಹಣ ಬಿಡುಗಡೆಯಾಗಿದೆ ಎನ್ನುವ ಪಟ್ಟಿಯನ್ನು ಅವರು ಬಿಡುಗಡೆಗೊಳಿಸಿದ್ದು ಅನುದಾನದ ವಿವರಗಳು ಇಲ್ಲಿದೆ.
ಈ ಅನುದಾನ ದೊರಕಲು ಶ್ರಮಿಸಿದ ಕ್ಷೇತ್ರದ ಮಾಜಿ ಶಾಸಕರು, ಮಾಜಿ ಸಚಿವರಾದ ಕೆ.ಅಭಯಚಂದ್ರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top