ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಕೋಟದ ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶಿವರಾಮ ಕಾರಂತ ಪ್ರಶಸ್ತಿ’ ಗೆ ಈ ವರ್ಷ ಆಯ್ಕೆಯಾಗಿರುವ ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ ಮೇಘಾಲಯದ ರಾಜ್ಯಪಾಲರಾದ ವಿಜಯ ಶಂಕರ್ ಅವರು ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತ್ ಗಳಿಗೆ ಪ್ರತಿ ವರ್ಷ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಸುದೇವ ಉಪಾಧ್ಯಾಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ, ಸದಸ್ಯರಾದ ರಮೇಶ್ ಶೆಟ್ಟಿ, ಸತೀಶ್ ಕರ್ಕೇರ,ಕಲ್ಯಾಣಿ ಹಾಗೂ ಸಿಬ್ಬಂದಿಗಳು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
