ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ವತಿಯಿಂದ ನಮ14 ರಿಂದ 20 ರ ವರೆಗೆ ನಡೆಯಲಿರುವ ಸಹಕಾರ ಸಪ್ತಾಹ ಸಂಭ್ರಮ ಕಾರ್ಯಕ್ರಮದಲ್ಲಿ ಉದ್ಯಮಿ, ನಿಶ್ಮಿತಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ನಾರಾಯಣ ಪಿ.ಎಂ. ಅವರಿಗೆ ‘ಸಮಗ್ರ ಸಾಧಕ ಪ್ರಶಸ್ತಿ’ ಪ್ರದಾನ ನಡೆಯಲಿದೆ.
ಕಳೆದ ಹಲವು ವರ್ಷಗಳಿಂದ ಮೂಡುಬಿದಿರೆಯಲ್ಲಿ ನಿಶ್ಮಿತಾ ಹೆಸರಿನಲ್ಲಿ ಸಾರಿಗೆ ಉದ್ಯಮ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ನಾರಾಯಣ ಪಿ.ಎಂ.ಅವರು ಸಾಮಾಜಿಕ, ದಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ನ.15 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದ್ದು ಶಾಸಕ ಉಮಾನಾಥ ಕೋಟ್ಯಾನ್ ಅವರು ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಮೂಡುಬಿದಿರೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಶ್ರೀಪತಿ ಭಟ್ ಹಾಗೂ ದ.ಕ.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
