ನೆಲ್ಲಿಕಾರು ಪರಿಸರದಲ್ಲಿ ಬಿಜೆಪಿಯಲ್ಲಿ ಸಕ್ರಿಯರಾಗಿ ತನ್ಮದೇ ಆದ ಬೆಂಬಲಿಗರನ್ನು ಹೊಂದಿರುವ ನಾಗೇಶ್ ಮಯ್ಯ ಅವರು ಇತ್ತೀಚೆಗೆ ಮಾಜಿ ಸಚಿವ ಕೆ.ಅಭಯಚಂದ್ರ ಹಾಗೂ ಕೆ.ಪಿ.ಸಿ.ಸಿ.ಕಾರ್ಯದರ್ಶಿ ಮಿಥುನ್ ರೈ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಪ್ರವೀಣ್ ಕುಮಾರ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಕೋಟ್ಯಾನ್, ಕೆ.ಪಿ.ಸಿ.ಸಿ.ಸದಸ್ಯ ವಸಂತ ಬೆರ್ನಾರ್ಡ್, ನೆಲ್ಲಿಕಾರು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ, ಮಾಜಿ ಉಪಾಧ್ಯಕ್ಷ ಶಶಿಧರ ಎಂ,ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.