ಕೆಪಿಸಿಸಿ ಕಾರ್ಯದರ್ಶಿ, ದಾನಿ ಇನಾಯತ್ ಅಲಿ ಮೂಲ್ಕಿ ಅವರ ಸಹಕಾರದಲ್ಲಿ ಸುಮಾರು 25 ಲಕ್ಷ ರೂ.ವೆಚ್ಚದಲ್ಲಿ ಮರ್ಹೂಂ .ನೌಷಾದ್ ಹಾಜಿ ಸೂರಲ್ಪಾಡಿ ಅವರ ಸ್ಮರಣಾರ್ಥ ಕಾಶಿಪಟ್ಣದ ದಾರುನ್ನೂರ್ ಎಜುಕೇಶನ್ ಸೆಂಟರ್ ನಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡವನ್ನು ಇನಾಯತ್ ಅಲಿ ಅವರು ಉದ್ಘಾಟಿಸಿದರು.
ದಾರುನ್ನೂರ್ ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಶರೀಫ್ ಹಾಜಿ ವೈಟ್ ಸ್ಟೋನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ.ಖಾಝಿ,ದಾರುನ್ನೂರ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ದುವಾ ನೆರವೇರಿಸಿದರು.



ಕೇಂದ್ರ ಸಮಿತಿ ಉಪಾಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ದಾರುನ್ನೂರ್ ಸಂಸ್ಥೆಯ ಅಭಿವೃದ್ಧಿಗಾಗಿ ಸಹಕಾರ ನೀಡುತ್ತಿರುವ ದಾನಿಗಳಿಗೆ,ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕೋಶಾಧಿಕಾರಿ ಉಸ್ಮಾನ್ ಹಾಜಿ ಏರ್ ಇಂಡಿಯಾ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಸಮದ್ ಹಾಜಿ ವಂದಿಸಿದರು. ವಿದ್ಯಾರ್ಥಿ ಶಹಿಬಾನ್ ಕಾರ್ಯಕ್ರಮ ನಿರೂಪಿಸಿದರು.
ಇನಾಯತ್ ಅಲಿ ಮತ್ತು ಶಾಫಿ ಮೂಲರಪಟ್ಣ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಾದ ಝಹಿದ್ ವಿಟ್ಲ ಮತ್ತು ರಾಫಿಹ್ ಮಾತನಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ, ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್ ಮತ್ತಿತರರು ಉಪಸ್ಥಿತರಿದ್ದರು.