ವಾಲ್ಪಾಡಿ ಮಾಡದಂಗಡಿ ಅಂಗನವಾಡಿ ಕೇಂದ್ರದಲ್ಲಿ ಸುಮಾರು 24 ವರ್ಷಗಳಲ್ಲಿ ಅಂಗನವಾಡಿ ಸಹಾಯಕಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಶ್ರೀಮತಿ ಜಯ ಅವರಿಗೆ ಬೀಳ್ಕೊಡುಗೆ ಹಾಗೂ ಆರಂಭದ ಹತ್ತು ವರ್ಷಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದ ಉಷಾ ಶೆಟ್ಟಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ವಾಲ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ನಡೆಯಿತು.




ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶಮೀಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶುಭಾ,ವಾಲ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹನಗುಂದ,ಪಂಚಾಯತ್ ಕಾರ್ಯದರ್ಶಿ ಶೇಖರ್,ಪಂಚಾಯತ್ ಸದಸ್ಯ ಶ್ರೀಧರ ಬಂಗೇರ,ಮಾಡದಂಗಡಿ ಶಾಲಾ ಶಿಕ್ಷಕಿ ರಶ್ಮಿ ಎಂ.ಎಸ್,ಆಶಾ ಕಾರ್ಯಕರ್ತರಾದ ಪ್ರಮೀಳಾ, ಕವಿತಾ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.



ಅಂಗನವಾಡಿ ಕಾರ್ಯಕರ್ತೆ ಸುನೀತಾ ಅವರು ಸ್ವಾಗತಿಸಿ, ಅಳಿಯೂರು ಅಂಗನವಾಡಿ ಸಹಾಯಕಿ ವಸಂತಿ ಅವರು ವಂದಿಸಿದರು. ಪತ್ರಕರ್ತ ಅಶ್ರಫ್ ವಾಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಆಳ್ವಾಸ್ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಅಂಗನವಾಡಿ ಮಕ್ಕಳಿಗೆ ಪುಸ್ತಕ ವಿತರಿಸಿದರು.

