ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತಾನು ವಾಸ್ತವ್ಯವಿದ್ದ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಹೊಸೂರು ಮೂಲದ ರವಿಕುಮಾರ್ ಎಂಬವರ ಮಗ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಶಶಾಂಕ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿಟ್ಟಿದ್ದನೆನ್ನಲಾಗಿದ್ದು ಆತ್ಮಹತ್ಯೆಗೆ ನಾನೇ ಕಾರಣವೆಂಬರ್ಥದಲ್ಲಿತ್ತೆನ್ನಲಾಗಿದೆ. ಆದರೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಪ್ರಕರಣ ದಾಖಲಿಸಿಕೊಂಡಿದ್ದಾರೆ.
