ನೆಲ್ಲಿಕಾರು ಗ್ರಾಮ ಪಂಚಾಯತ್ ನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಚಾರ್ಲ್ಸ್ ಸಾಂತ್ ಮಯೋರ್ ಅವರು ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಜೇಶ್ ಹೆಗ್ಡೆ ಅವರು ಸ್ಪರ್ಧಿಸಿದ್ದು ಚಾರ್ಲ್ಸ್ ಅವರು ಸುಮಾರು 180 ಕ್ಕಿಂತಲೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆಂದು ತಿಳಿದು ಬಂದಿದೆ.
ವಿಜೇತರಾದ ಚಾರ್ಲ್ಸ್ ಅವರನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಕೆ.ಪಿ.ಸಿ.ಸಿ ಕಾರ್ಯದರ್ಶಿ ಮಿಥುನ್ ರೈ ಅವರು ಅಭಿನಂದಿಸಿದ್ದಾರೆ.
