Latest News

ಶಿಕ್ಷಣ ಸಂಸ್ಥೆಗಳ ವ್ಯಾಪಾರೀಕರಣದಿಂದಾಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಹೊಡೆತ: ಅಭಯಚಂದ್ರ

Picture of Namma Bedra

Namma Bedra

Bureau Report

ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಕೇವಲ ಹಣ ಮಾಡುವ ಹಿಂದೆ ಹೋಗಿ ವ್ಯಾಪಾರೀಕರಣಕ್ಕಿಳಿದಿದೆ,ಹಾಗಾಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ದೊಡ್ಡ ಹೊಡೆತ ಬಿದ್ದಿದ್ದು ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗಲಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಖೇದ ವ್ಯಕ್ತಪಡಿಸಿದ್ದಾರೆ.
ಜನರಲ್ಲೀಗ ಆಂಗ್ಲಮಾಧ್ಯಮದ ಮೇಲಿನ ವ್ಯಾಮೋಹ ಹೆಚ್ಚುತ್ತಿದೆ, ಕನ್ನಡ ಕನ್ನಡ ಎಂದು ಬೊಬ್ಬಿಡುವ ರಾಜಕಾರಣಿಗಳು, ಅಧಿಕಾರಿಗಳು ಕೂಡಾ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೇ ಕಳುಹಿಸುತ್ತಿದ್ದಾರೆ, ಮೂಡುಬಿದಿರೆ ತಾಲೂಕಿನ ನೀರುಡೆ ಹಾಗೂ ತಾಕೋಡೆಯ ಅನುದಾನಿತ ಪ್ರೌಢಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದಾಗಿ ಈಗಾಗಲೇ ಮುಚ್ಚಿದೆ,ಶಿರ್ತಾಡಿ, ಕಲ್ಲಮುಂಡ್ಕೂರು ಹಾಗೂ ಬೆಳುವಾಯಿ ಪ್ರೌಢಶಾಲೆಗಳು ವಿದ್ಯಾರ್ಥಿಗಳ ಕೊರತೆಯನ್ನೆದುರಿಸುತ್ತಿದೆ ಎಂದು ಅವರು ಹೇಳಿದರು.
1966 ರಲ್ಲಿ ಮೂಡುಬಿದಿರೆಯಲ್ಲಿ ಪ್ರಾರಂಭಗೊಂಡ ಎರಡನೇ ಪ್ರೌಢಶಾಲೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ನೀಡಲಾಗುತ್ತಿದೆ,ಡಿಸೆಂಬರ್ ಮೂರರಂದು ಈ ಶಾಲೆಯ ವಾರ್ಷಿಕೋತ್ಸವ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೇಳಿದ ಅವರು ಬಿ.ಆರ್.ಪಿ ಸಹಿತ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಜನರ ಸಹಕಾರ ಅಗತ್ಯವಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅವರ ಸಹಪಾಠಿ,ಉದ್ಯಮಿ ನಝೀರ್ ಹುಸೈನ್ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು