ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು- ಮೂಡುಬಿದಿರೆ- ಕಾರ್ಕಳ ರಸ್ತೆಯಲ್ಲಿ ನಾಳೆಯಿಂದಲೇ ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ.
ವಿಧಾನಸಭಾಧಿವೇಶನದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಈ ಬಗ್ಗೆ ಪ್ರಸ್ತಾಪಿಸಲು ಮುಂದಾದಾಗ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ‘ ನಾಳೆಯಿಂದಲೇ ಬಸ್ ಸಂಚಾರ’ ಪ್ರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಈ ಮೂಲಕ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ರಾಜ್ಯ ಸರಕಾರದ ಈ ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕಾಗಿ ಧ್ವನಿ ಎತ್ತಿದ್ದರು.ಇದೀಗ ಉಮಾನಾಥ ಕೋಟ್ಯಾನ್ ಅವರು ಕೂಡಾ ಈ ಬಗ್ಗೆ ಪ್ರಸ್ತಾಪಿಸಿರುವುದರಿಂದ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುವಂತಾಗಿದೆ.
ಈ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ಆರಂಭಿಸಬೇಕೆಂದು ಅರುಣ್ ಶೆಟ್ಟಿ ಸಹಿತ ಈ ಭಾಗದ ವಿದ್ಯಾರ್ಥಿಗಳು, ಸಾರ್ವಜನಿಕರ ಆಗ್ರಹವಿತ್ತು.
ಕೆ.ಎಸ್.ಆರ್.ಟಿ.ಸಿ.ಯಿಂದ ಮಂಜೂರಾತಿ ದೊರಕಿದ್ದರೂ ಅದು ಸ್ಥಗಿತಗೊಂಡಿತ್ತು.
ಇದೀಗ ನಾಳೆಯಿಂದಲೇ ನಾಲ್ಕು ಬಸ್ ಗಳು ಓಡಾಡಲಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ನಿನ್ನೆಯ ದಿನ ‘ ನಮ್ಮ ಬೆದ್ರ’ ವೆಬ್ ಸೈಟ್ ನಲ್ಲಿ ವರದಿ ಪ್ರಕಟವಾಗಿತ್ತು.
