ಪುತ್ತಿಗೆ ಕನ್ವೆನ್ಶನ್ ಸೆಂಟರ್ ಇಂದು ಉದ್ಘಾಟನೆ

Picture of Namma Bedra

Namma Bedra

Bureau Report

ಮೂಡುಬಿದಿರೆ ಸಮೀಪದ ಪುತ್ತಿಗೆ ನೂರಾನಿ ಮಸೀದಿ ಬಳಿ ನೂತನವಾಗಿ ನಿರ್ಮಿಸಲಾಗಿರುವ ಪುತ್ತಿಗೆ ಕನ್ವೆನ್ಷನ್‌ ಸೆಂಟರ್- ಮದುವೆ ಹಾಲ್ ಇಂದು ಸಂಜೆ 3 ಗಂಟೆಗೆ ಉದ್ಘಾಟನೆಗೊಳ್ಳಲಿದೆ.


ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಎಂ.ಮೋಹನ ಆಳ್ವ ಅವರು ನೂತನ ಸಭಾಭವನವನ್ನು ಉದ್ಘಾಟಿಸಲಿದ್ದು ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ, ಪದ್ಮಶ್ರೀ ಹರೇಕಳ ಹಾಜಬ್ಬ ಹಾಗೂ ಅಲಂಗಾರು ಚರ್ಚ್ ನ ಧರ್ಮಗುರುಗಳಾದ ವಂ.ಮೆಲ್ವಿನ್ ನೊರೊನ್ಹ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ನೂರಾನಿ ಮಸೀದಿಯ ಅಧ್ಯಕ್ಷರಾದ ಅಬುಲ್ ಅಲಾ ಪುತ್ತಿಗೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಮಸೀದಿಯ ಖತೀಬರಾದ ಝಿಯಾವುಲ್ಲಾ ಖಾನ್,ಉಪಾಧ್ಯಕ್ಷ ಶೇಖ್ ಬಶೀರ್,ಕಾರ್ಯದರ್ಶಿ ಮುಹಮ್ಮದ್ ಖಯ್ಯೂಮ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಮುಹಮ್ಮದ್ ಶರೀಫ್ ಅವರು ಉಪಸ್ಥಿತರಿರಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top